ಮಣಿಪುರ : ಮಾಯನ್ಮಾರ್ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಮೂವರು ಉಗ್ರರು ಹುತಾತ್ಮರಾಗಿದ್ದಾರೆ. ಮಾಯನ್ಮಾರ್ ಗಡಿ ಸಮೀಪದ ಚಾಂಡೆಲ್ ಜಿಲ್ಲೆಯ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಷನ್ ಆರ್ಮಿಯ ಭಯೋತ್ಪಾದಕರು ಗಡಿಯಲ್ಲಿ ಗಸ್ತು ತಿರುಗುತ್ತಿದ್ದ 4 ಅಸ್ಸಾಂ ರೈಫಲ್ಸ್ ಘಟಕದ ಯೋಧರ ಮೇಲೆ ಮೊದಲು ಐಇಡಿ ಬಾಂಬ್ ಬ್ಲಾಸ್ಟ್ ಮಾಡಿದ್ದು, ಬಳಿಕ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ ಗಂಭೀರವಾಗಿ ಗಾಯವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.










