ಗುಡುಗು-ಮಿಂಚಿನ ಮಿಲನ ; ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಹಿಂದೆಂದೂ ಕಾಣದ ಅಪರೂಪದ ದೃಶ್ಯ!

103
firstsuddi

ಚಿಕ್ಕಮಗಳೂರು : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಮಳೆ ಆರಂಭಕ್ಕೂ ಮುನ್ನ ಆರಂಭವಾದ ಗುಡುಗು-ಸಿಡಿಲಿನ ಮಧ್ಯೆ ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಕಂಡುಬಂದ ದೃಶ್ಯ ನೋಡುಗರ ಮನಸೊರೆಗೊಂಡಿತು.

ಗುಡುಗು-ಮಿಂಚಿನ ಸಮ್ಮಿಲನದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಶೃಂಗೇರಿ ಶಾರದಾಂಬೆ ದೇಗುಲದ ಸುಂದರ ನೋಟ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ನಿನ್ನೆ ಸಂಜೆ ವೇಳೆಗೆ ಶಾರದಾಂಭೆ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಈ ಅಪರೂಪದ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಶೃಂಗೇರಿ ಶಾರದಾಂಭೆ ದೇಗುಲದ ಆಕಾಶದ ಮೇಲ್ಭಾಗದಲ್ಲಿ ದೇಗುಲವನ್ನು ಮಿಂಚಿನಿಂದ ಕೃತಕವಾಗಿ ಅಲಂಕರಿಸಿದಂತಿತ್ತು.