ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಬಿ ರಿಪೋರ್ಟ್ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ…

87
firstsuddi

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಉಡುಪಿ ಪೊಲೀಸರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ನೀಡಿದ್ದರು. ಇದೀಗ ಸಂತೋಷ್ ಕುಟುಂಬ ಬಿ ರಿಪೋರ್ಟ್ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಬೆಳವಣಿಗೆಯಿಂದ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಏಪ್ರಿಲ್ ನಲ್ಲಿ ಉಡುಪಿ ಲಾಡ್ಜ್ ಒಂದರಲ್ಲಿ ಈಶ್ವರಪ್ಪ ಹೆಸರು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಎಸ್​ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಿದ ಬಳಿಕ ಈಶ್ವರಪ್ಪ ಸೇರಿದಂತೆ ಇತರ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು.