ಗುರುಪುರದಲ್ಲಿ ಗುಡ್ಡ ಕುಸಿದು ಸಾವನಪ್ಪಿದ ಮಕ್ಕಳ ಮನೆಯವರಿಗೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ…

152
firstsuddi

ಮಂಗಳೂರು: ನಿನ್ನೆ ಗುರುಪುರ ಬಳಿ ಗುಡ್ಡ ಕುಸಿದು ಸಾವನ್ನಪ್ಪಿದವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು. ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿ 16 ವರ್ಷದ ಬಾಲಕ ಸಫ್ವಾನ್, 10 ವರ್ಷದ ಬಾಲಕಿ ಸಹಾಲಾ ಭಾನುವಾರ ಮೃತಪಟ್ಟಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಗಳ ಪರಿಹಾರವನ್ನು ಘೋಷಣೆ ಮಾಡಿದ್ದು, ಜಿಲ್ಲಾಧಿಕಾರಿಗಳು ಕೂಡಲೇ ವಿತರಣೆ ಮಾಡಲು ಸೂಚನೆ ನೀಡಿದ್ದರು ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.