ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿ ಆತ್ಮಹತ್ಯೆ…

87
firstsuddi

ಬೆಳಗಾವಿ : ಗುರು ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮಹಿಳೆಯರು ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನು ಸಹ ಉಲ್ಲೇಖಿಸಿ ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೈಲಹೊಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.