ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಗುಲಾಬ್ ಚಂಡಮಾರುತ ಉಂಟಾಗಿದ್ದು, ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ರಾಯಚೂರಿನಲ್ಲಿ ಇಂದು ಹಾಗೂ ನಾಳೆ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಇನ್ನೂ ಗುಲಾಬ್ ಚಂಡಮಾರುತ ಪರಿಣಾಮವಾಗಿ ಬೀದರ್ ಜಿಲ್ಲೆಯಾದ್ಯಂತ ದಟ್ಟವಾದ ಮೋಡಗಳಿಂದ ಮಂಜಿನ ನಗರಿಯಾಗಿದ್ದು, ಇಂದು ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಗುಲಾಬ್ ಚಂಡಮಾರುತ ಎಫೆಕ್ಟ್ ನಿಂದಾಗಿ ಜಿಲ್ಲೆಯ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.










