ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ : ಸಚಿವ ಬಿ.ಸಿ.ಪಾಟೀಲ್.

63
firstsuddi

ಮೈಸೂರು : ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 25 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆರಗ ಜ್ಞಾನೇಂದ್ರ ಅವರು ಗೃಹ ಖಾತೆ ನಿಭಾಯಿಸುತ್ತಿದ್ದಾರೆ. ಅವರ ಕೆಲಸ ವಿಚಾರವಾಗಿ ಮೊಸರಲ್ಲಿ ಕಲ್ಲು ಹುಡುಕುವುದು ಬೇಡ. ಒಂದು ಖಾತೆ ಬದಲಾವಣೆಯಾಗಿ, ನನಗೆ ಗೃಹ ಖಾತೆ ಕೊಟ್ಟರೆ ನಿಭಾಯಿಸುವೆ ಎಂದರು.

ರಾಜ್ಯದಲ್ಲಿ ಧರ್ಮ ದಂಗಲ್ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಶಾಂತಿ ಕೆಟ್ಟಿಲ್ಲ ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹುಬ್ಬಳ್ಳಿ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಫ್ಐಆರ್ ಮಾಡಲಾಗಿತ್ತು. ಆದರೂ ಸಾವಿರಾರು ಜನರು ಗುಂಡಾವರ್ತನೆ ತೋರಿದ್ದಾರೆ. ಆರೋಪಿಗಳು ಯುವಕನ ಶಿರಚ್ಛೇದ ಮಾಡುತ್ತೇವೆ ಎನ್ನುತ್ತಾರೆ. ಇದು ಭಾರತನಾ ತಾಲಿಬಾನಾ ಎಂದು ಪ್ರಶ್ನಿಸಿದರು.