ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದ ಸಂಸದೆ ಸುಮಲತಾ ಅಂಬರೀಶ್…

341
firstsuddi

ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಬಗ್ಗೆ ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ “ ದೇಶದ ಗೃಹ ಸಚಿವರೊಂದಿಗೆ ಕ್ಷೇತ್ರದ ಹಲವಾರು ಕೆಲಸಗಳಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದೇನೆ” ಎಂದು ಬರೆದು ಪೋಸ್ಟ್ ಮಾಡಿದ್ದು, ಹಾಗೂ ಅಮಿತ್ ಶಾ ಅವರ ಜೊತೆಗೆ ಮಾತುಕತೆ ನಡೆಸಿದ ಫೋಟೋವನ್ನು ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಹಲವು ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವಂತೆ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ ಎಂದು ಸುಮಲತಾ ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ.