ಗೊಟಬಯ ರಾಜಪಕ್ಷ ಪರಾರಿ ಬೆನ್ನಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ…

54
firstsuddi

ಕೊಲಂಬೊ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿಯಾದ ಬೆನ್ನಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನದ ಸುದ್ದಿ ಹೊರಬಿದ್ದ ಕೂಡಲೇ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಪ್ರತಿಭಟನೆ ವೇಳೆ ಹಲವೆಡೆ ಕಲ್ಲುತೂರಾಟ ನಡೆದಿದೆ. ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉದ್ರಿಕ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಚ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಆಶ್ರುವಾಯು ಶೆಲ್ ಗಳನ್ನು ಸಿಡಿಸಿದರು. ಇದೀಗ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಪ್ರಧಾನಿ ಕಚೇರಿ ಈ ಬಗ್ಗೆ ಮಾಹಿತಿ ನೀಡಿದೆ.

ಶ್ರೀಲಂಕಾದ ಪಶ್ಚಿಮ ಪ್ರಾಂತ್ಯದಲ್ಲಿ ಕಫ್ರ್ಯೂ ವಿಧಿಸಲು ಮತ್ತು ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಹಂಗಾಮಿ ಅಧ್ಯಕ್ಷ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಆದೇಶ ಹೊರಡಿಸಿದ್ದಾರೆ.