ಗೋಕಾಕ್ ಅಭಿವೃದ್ಧಿಯಾಗಿಲ್ಲ ಅಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ : ರಮೇಶ್ ಜಾರಕಿಹೊಳಿ.

75
firstsuddi

ಅಥಣಿ(ಬೆಳಗಾವಿ): ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಅಂದ್ರೆ ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನ ಬಂದಂತೆ ಮಾತಾಡುತ್ತಾರೆ. ಅವರಿಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ, ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಎಂದರೆ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ನಾನು ಹಾಗೂ ಮಹೇಶ್ ಕುಮಟಳ್ಳಿ ಸಚಿವರಾಗುವುದರ ಬಗ್ಗೆ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ ಎಂದ ಅವರು, ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ವರಿಷ್ಠರು ಮುಖಂಡರು ಎಲ್ಲವನ್ನು ಸರಿಪಡಿಸುತ್ತಾರೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಸವದಿ ಅವರು ನಮ್ಮ ಪಕ್ಷದವರು, ನಾನು ಮಾತನಾಡೋದಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.