ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿದ್ದರಾಮಯ್ಯ-ತಲಾ 5ಲಕ್ಷ ರೂ ಚೆಕ್ ವಿತರಣೆ…

139
firstsuddi

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ಪೌರತ್ವ ತಿದ್ದುಪಡಿ ಪ್ರತಿಭಟನೆಯ ಹಿಂಸಾಚಾರದ ವೇಳೆ ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ತಲಾ 5 ಲಕ್ಷ ರೂ ಚೆಕ್‍ನ್ನು ವಿತರಣೆ ಮಾಡಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ 2.5 ಲಕ್ಷ ರೂ ಹಣವನ್ನು ನೀಡಲಾಗಿದೆ. ಈ ವೇಳೆ ಮಾಜಿ ಸಚಿವರಾದ ಬಿ. ರಮಾನಾಥ ರೈ, ಯು.ಟಿ. ಖಾದರ್, ಶಾಸಕರಾದ ಐವನ್ ಡಿಸೋಜ, ಹರೀಶ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.