ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್.

78
firstsuddi

ಪಣಜಿ : ರಾಕಿಂಗ್ ಸ್ಟಾರ್ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಪಣಜಿಯಲ್ಲಿ ಭೇಟಿ ಮಾಡಿದ್ದಾರೆ. ಈ ಕುರಿತ ಫೋಟೋಗಳನ್ನು ಸಿಎಂ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಟ ಯಶ್ ಅವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಕುರಿತು ಭಾರೀ ಚರ್ಚೆ ಆಗುತ್ತಿದೆ. ಅನೇಕ ಸಂದರ್ಶನಗಳಲ್ಲಿ ಯಶ್, ‘ನನ್ನ ಗುರಿ ಬೇರೆ. ನಾನು ತಲುಪಬೇಕಿರುವ ಕೇಂದ್ರಸ್ಥಾನ ಬೇರೆ’ ಎನ್ನುವ ಅರ್ಥದಲ್ಲಿ ಅನೇಕ ಬಾರಿ ಮಾತಾಡಿದ್ದೂ ಇದೆ. ಇದೀಗ ಪತ್ನಿ ಸಮೇತರಾಗಿ ಗೋವಾ ಸಿಎಂ ಪ್ರಮೋದ್ ರಾವತ್ ಅವರನ್ನು ಭೇಟಿಯಾಗಿರುವ ಯಶ್ ನಡೆ ರಾಜಕೀಯಕ್ಕೆ ಧುಮಕುವುದರ ಮುನ್ಸೂಚನೆಯೇ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.