ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್, ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬಾತ ಕೊನೆಯುಸಿರೆಳೆದರೆ, ಹತ್ತುಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.










