ನವದೆಹಲಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣವನ್ನು ಮರು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಕರ್ನಾಟಕ ಹೈಕೊರ್ಟ್ ಈ ಹಿಂದೆ ಆರೋಪಿ ಮೋಹನ್ ನಾಯಕ್ ವಿರುದ್ದ ದಾಖಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ (KCOCA) ಪ್ರಕರಣವನ್ನು ರದ್ದು ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ಸುಪ್ರೀಂಕೋರ್ಟ್ ಗೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ತ್ರಿ ಸದಸ್ಯ ಪೀಠ ಇಂದು ಕೋಕಾ ಕಾಯ್ದೆಯಡಿ ಆರೋಪಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಎತ್ತಿಹಿಡಿದಿದೆ.
2021ರ ಸೆಪ್ಟೆಂಬರ್ 21 ರಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಹುಜೀಫಾ ಅಹ್ಮದಿ, ತೀಸ್ತಾ ಸೆತಲ್ವಾದ್ ವಾದಿಸಿದ್ದರು.
2017ರಲ್ಲಿ ಸೆ.5ರಂದು ಗೌರಿ ಲಂಕೇಶ್ ಅವರನ್ನು ಮನೆಯ ಬಾಗಿಲ ಬಳಿಯೇ ಶೂಟ್ ಮಾಡಿ ಹತ್ಯೆ ಮಾಡಲಾಗಿತ್ತು.










