ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ, ಜನರಲ್ಲಿ ಮನೆಮಾಡಿದ ಆತಂಕ…

241
firstsuddi

ಮಂಗಳೂರು : ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾದ ಘಟನೆ ಪುತ್ತೂರು ತಾಲ್ಲೂಕಿನ ಉಪ್ಪಿಂಗಡಿ ಸಮೀಪದ ಕರವೇಲು ಬಳಿ ನಡೆದಿದ್ದು, ಸುತ್ತ ಮುತ್ತ ಜನರಲ್ಲಿ ಆತಂಕ ಮನೆಮಾಡಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅನಿಲ ಸೋರಿಕೆಯಾಗಿದ್ದು, ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್‌ ನ  ಕ್ಯಾಪ್ ಏಕಾಏಕಿ ತೆರೆದ ಪರಿಣಾಮ ಭಾರಿ ಪ್ರಮಾಣದ ಅನಿಲ ಸೋರಿಕೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸ್ಥಳಕ್ಕೆ ಎಂಆರ್‌ಪಿಎಲ್ (Mangalore Refinery and Petrochemicals Limited) ತಜ್ಞರು ಆಗಮಿಸಿ ಅನಿಲ ಸೋರಿಕೆ ತಡೆದಿದ್ದಾರೆ.