ನವದೆಹಲಿ : ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಅವರು ನಿನ್ನೆ ರಾತ್ರಿ ಹೃದಯಾಘಾತಕ್ಕೀಡಾಗಿ ಇಹಲೋಕ ತ್ಯಜಿಸಿದ್ದಾರೆ.
ನಿನ್ನೆ ರಾತ್ರಿ 11 ಗಂಟೆಯ ವೇಳೆಗೆ ಅವರಿಗೆ ಹೃದಯಾಘಾತವಾಗಿದೆ. ಕುಟುಂಬಸ್ಥರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗಮಧ್ಯೆಯೇ ಅಭಿಜಿತ್ ಸೇನ್ ಅವರು ಕೊನೆಯುಸಿರೆಳೆದಿದ್ದಾರೆ.
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಅಭಿಜಿತ್ ಸೇನ್ ಅವರು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನ ಕಳೆದಿದ್ದಾರೆ. 2004 ರಿಂದ 2014 ರವರೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರವಧಿಯಲ್ಲಿ ಜಾರಿ ಇದ್ದ ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.










