ಗ್ರಾಹಕರಿಗೆ ಸಿಹಿ ಸುದ್ದಿ ; ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 102 ರೂ.ಇಳಿಕೆ…

58
firstsuddi

ನವದೆಹಲಿ : ಹೊಸ ವರ್ಷದಂದು ವಾಣಿಜ್ಯ ಸಿಲಿಂಡರ್ ಗ್ರಾಹಕರಿಗೆ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಸಿಹಿಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 102.50ರಷ್ಟು ಕಡಿತಗೊಳಿಸಿದೆ.

ಜನವರಿ 1, 2022 ರಂದು, ದೆಹಲಿಯಲ್ಲಿ 19 ಕೆಜಿಯ ಸಿಲಿಂಡರ್ 1998.50 ರೂ. ದೊರೆಯಲಿದೆ. ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಈಗ 2,072 ರೂಪಾಯಿ, ಮುಂಬೈನಲ್ಲಿ 19 ಕೆಜಿ  ವಾಣಿಜ್ಯ ಸಿಲಿಂಡರ್ ಬೆಲೆ ಈಗ 1,948.5 ರೂ., ಚೆನ್ನೈನಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,132 ರೂ.ಗೆ ಲಭ್ಯವಾಗಲಿದೆ.

ಕಳೆದ ವರ್ಷದ ಡಿಸೆಂಬರ್ 1ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಈ ಬಾರಿ ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.