ಬೆಂಗಳೂರು: ಜುಲೈ 14 ರಂದು ಉಡಾವಣೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೂರನೇ ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (ಎಲ್ಎಂ) ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.
ಕೇವಲ ಮೂರು ಇತರ ದೇಶಗಳು (ರಷ್ಯಾ, ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್) ಯಶಸ್ವಿಯಾಗಿ ಚಂದ್ರನ ಮೇಲೆ ರೋವರ್ ಅನ್ನು ಇಳಿಸಿವೆ. ಸುಮಾರು 3,900 ಕೆಜಿ ತೂಕದ ಚಂದ್ರಯಾನ-3 ರಾಕೆಟ್ ಅನ್ನು ಅಭಿವೃದ್ಧಿಪಡಿಸಲು ಮತ್ತು ಉಡಾವಣೆ ಮಾಡಲು 615 ಕೋಟಿ ರೂ. ಖರ್ಚಾಗಿದೆ.
ಚಂದ್ರಯಾನ-3 ಮಿಷನ್ ಯಶಸ್ವಿಯಾಗುವ ಮೂಲಕ ಭಾರತ, ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶವಾಗಲಿದೆ.










