ಬೆಂಗಳೂರು : ಚಂದ್ರು ಹತ್ಯೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ನಿಯೋಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.
ಏಪ್ರಿಲ್ 3ರ ರಾತ್ರಿ ಜೆ.ಜೆ. ನಗರ ಠಾಣಾ ವ್ಯಾಪ್ತಿಯಲ್ಲಿ ಕೊಲೆಯಾದ ಚಂದ್ರು ಎಂಬ ಯುವಕನ ಹತ್ಯೆ ಕುರಿತು ಉದ್ದೇಶಪೂರ್ವಕವಾಗಿ ಕೋಮು ಸೌಹಾರ್ದತೆ ಕದಡುವ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ನಿಯೋಗ ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದು, ಗೃಹ ಸಚಿವ ಹಾಗೂ ಸಿಟಿ ರವಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿದೆ.










