ಚನ್ನಪಟ್ಟಣ ಚುನಾವಣೆಗೆ ಕಾಂಗ್ರೇಸ್ ಮುಖಂಡರ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ.

28

ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ರಾಜ ರಾಜಕೀಯದಲ್ಲಿ ಬಿರುಸಿನ ಚಕಮಕಿ ನಡೆಯುತ್ತಿದೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೇಸ್ ಅಭ್ಯರ್ಥಿಯಾಗಿ ನಿಲ್ಲಲು ಟಿಕೆಟ್ ಘೋಷಣೆಯಾಗಿದೆ. ಇಂದು ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೇಸ್ ಮುಖಂಡರ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಇನ್ನು ಇತರ ಕಾಂಗ್ರೇಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಸಮಯದಲ್ಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗ ರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವರಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಹಾಗೂ ಕಾಂಗ್ರೇಸ್ ಸರ್ಕಾರದ ಇನ್ನೂ ಹಲವಾರು ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು ಮಾಜಿ ಶಾಸಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಹೈವೋಲ್ಟೇಜ್ ಕಣವಾಗುತ್ತಿದೆ. ಇತ್ತ ಎನ್‍ಡಿಎ ಕೂಡ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ.ಯೋಗೇಶ್ವರ್ ಸೋಲಿಸಲು ಕೆಲವು ತಂತ್ರ ರೂಪಿಸಲು ಸ್ಥಳೀಯ ಅಭ್ಯರ್ಥಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಅಥವಾ ಯಾವ ಅಚ್ಚರಿ ಪಡುವ ಅಭ್ಯರ್ಥಿನ್ನು ಕಣಕ್ಕಿಳಿಸಲಿದ್ದಾರೆಯೇ ಕಾದು ನೋಡಬೇಕಿದೆ.