ಚನ್ನರಾಯಪಟ್ಟಣ : ಕಾರು ಹಾಗೂ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿ- ನಾಲ್ವರು ಸಾವು…

157
First Suddi

ಚನ್ನರಾಯಪಟ್ಟಣ(ಹಾಸನ) : ಕಾರು ಹಾಗೂ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ಮುಖ್ಯರಸ್ತೆಯಲ್ಲಿ ನಡೆದಿದೆ.
ಇಂದು ಬೆಳಗಿನಜಾವ ಚನ್ನರಾಯಪಟ್ಟಣದ ಬೈಪಾಸ್ ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತಪಟ್ಟ ವ್ಯಕ್ತಿಗಳು ಯಾರು ಎನ್ನುವ ಬಗ್ಗೆ ಸರಿಯಾದ ಮಾಹಿತಿ ದೊರೆತಿಲ್ಲ.