ಬರ್ಲಿನ್ : ಹ್ಯಾಮ್‍ಬರ್ಗ್‍ನ ಯೆಹೋವ್‌ನ ವಿಟ್‍ನೆಸ್ ಚರ್ಚ್‍ನಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
ಗುಂಡಿನ ದಾಳಿ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹೆಲಿಕಾಪ್ಟರ್ ಮೂಲಕ ಥರ್ಮಲ್ ಇಮ್ಯಾಜಿಂಗ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸ್ಥಳೀಯ ನಿವಾಸಿಗಳಿಗೆ ಬೇರೆ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಡಿಸೆಂಬರ್ 2016 ರಲ್ಲಿ ಬರ್ಲಿನ್ ಕ್ರಿಸ್‌ಮಸ್ ಮಾರುಕಟ್ಟೆಯಲ್ಲಿ ಇಸ್ಲಾಮಿ ಉಗ್ರಗಾಮಿಗಳು ನಡೆಸಿದ ಭೀಕರ ಟ್ರಕ್ ರಾಂಪೇಜ್‌ನಲ್ಲಿ 12 ಜನರು ಸಾವನ್ನಪ್ಪಿದರು. ಅದೇ ಸಮಯದಲ್ಲಿ, ಕೆಲವು ದಿನಗಳ ಹಿಂದೆ ಟುನೀಶಿಯಾದಲ್ಲಿ ದಾಳಿ ನಡೆದಿತ್ತು.










