ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ- ಓರ್ವ ಸಜೀವ ದಹನ…

48
firstsuddi

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ನಗರದ ನೆಲಮಂಗಲದ ಅಂಚೇಪಾಳ್ಯದ ಬಳಿ ನಡೆದಿದೆ.

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಮಾರುತಿ ಎಕ್ಸ್ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ.

ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.