ಚಲಿಸುತ್ತಿದ್ದ ಕಾರಿನಲ್ಲೇ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರ…

106
firstsuddi

ತಿರವನಂತಪುರಂ: ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಪೊಲೀಸರು ಮೂವರು ವ್ಯಕ್ತಿ ಮತ್ತು ಓರ್ವ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ವಿವರ : ಗುರುವಾರ ರಾತ್ರಿ ಕೊಚ್ಚಿನ್ ಶಿಪ್ ಯಾರ್ಡ್ ಬಳಿಯ ಪಬ್ ಗೆ ಬಂದಿದ್ದ ಯುವ ಮಾಡೆಲ್ ರಾತ್ರಿ ಕುಡಿದಿದ್ದರು. ಈ ವೇಳೆ ಆರೋಪಿಗಳು ಕಾಕ್ಕನಾಡ್ ನಲ್ಲಿರುವ ಆಕೆಯ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡಿದ್ದಾರೆ. ತಡರಾತ್ರಿ ನಗರವೆಲ್ಲಾ ಸುತ್ತಾಡುತ್ತಾ ಚಲಿಸುತ್ತಿದ್ದ ಕಾರಿನಲ್ಲಿಯೇ ಮಾಡೆಲ್ ಮೇಲೆ ಅತ್ಯಾಚಾರವೆಸಗಿ, ನಂತರ ಹಲ್ಲೆ ನಡೆಸಿ ಕೊನೆಗೆ ಆಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದಾರೆ.

ಇದೀಗ ಯುವತಿ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪದರ್ಶಿಯನ್ನು ಆಕೆಯ ರೂಮ್ ಮೇಟ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.