ದಕ್ಷಿಣ ಕನ್ನಡ : ಚಲಿಸುತ್ತಿದ್ದ ಕಾರಿನ ಮೇಲೆ ಬೃಹದ್ದಾಕಾರದ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಸಿದ್ದವನದ ಬಳಿ ನಡೆದಿದೆ. ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್ ಮೃತ ದುರ್ಧೈವಿಗಳು. ಮೃತರು ಉಜಿರೆ ನಿವಾಸಿಗಳು ಎಂದು ತಿಳಿದು ಬಂದಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.