ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ!

72
firstsuddi

ಬೆಂಗಳೂರು : ಯುವಕನೋರ್ವ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾರ್ಥ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೋಹನ್ (29) ಮೃತ ದುರ್ದೈವಿ. ತುಮಕೂರಿನ ಗುಬ್ಬಿ ಮೂಲದ ಮೋಹನ್ ಗಾರ್ಮೆಂಟ್ಸ್ ಔಟ್ ಲೇಟ್ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ. ಹಲವು ದಿನಗಳಿಂದ ಮೋಹನ್ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗುತ್ತಿದೆ.

ಆತ್ಮಹತ್ಯೆಗೂ ಮುನ್ನ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟ್ ಬರೆದಿದ್ದಾನೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.