ಚಾಕೊಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ…

107
firstsuddi

ದಾವಣಗೆರೆ: ಚಾಕೊಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೋಷಕರು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಬಾಲಕಿ ಒಬ್ಬಳೇ ಆಟವಾಡುತ್ತಿರುವುದನ್ನು ಅದೇ ಗ್ರಾಮದ ನಾಗ ಎಂಬಾತ ಗಮನಿಸಿದ್ದಾನೆ. ಅಲ್ಲದೆ ಆಟವಾಡುತ್ತಿದ್ದ ಬಾಲಕಿಯ ಬಳಿ ನಿನಗೆ ಚಾಕೊಲೇಟ್ ಕೊಡಿಸುತ್ತೇನೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ನಂತರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಇತ್ತ ಪೋಷಕರು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು 24 ಗಂಟೆ ಒಳಗೆ ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.