ಚಿತ್ರದುರ್ಗ: ಚಾಕೊಲೇಟ್ ಎಂದು ಮಾತ್ರೆ ಸೇವಿಸಿ ನಾಲ್ಕು ವರ್ಷದ ಮಗು ಸಾವನ್ನಪ್ಪಿದ ಘಟನೆ ತಾಲೂಕಿನ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಹೃತ್ವಿಕ್(4) ಮೃತ ಬಾಲಕ. ಕಳೆದ 4 ದಿನಗಳ ಹಿಂದೆ ಮನೆಯಲ್ಲಿದ್ದ ಮಾತ್ರೆ ಸೇವಿಸಿದ್ದ ಮಗುವನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.
ಇತ್ತೀಚೆಗೆ ಮೃತ ಮಗುವಿನ ತಾಯಿ ಪವಿತ್ರಾ ಎಂಬುವವರಿಗೆ ಶಸ್ತ್ರಚಿಕಿತ್ಸೆ ಆಗಿತ್ತು. ಈ ಹಿನ್ನಲೆ ವೈದ್ಯರು ನೀಡಿದ್ದ ಮಾತ್ರೆಗಳನ್ನು ಮನೆಯಲ್ಲಿಟ್ಟಿದ್ದರು. ಚಾಕೊಲೇಟ್ ಎಂದು ಭಾವಿಸಿ ಮಾತ್ರೆಗಳನ್ನು ಸೇವಿಸಿದ್ದ ಮಗು ಅಸ್ವಸ್ಥಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಿದ್ದರು. ಆದರೀಗ ಮಗು ಸಾವನ್ನಪ್ಪಿದೆ.
ಈ ಸಂಬಂದ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










