ಚಾಮರಾಜನಗರದ ಮೊರಾರ್ಜಿ ದೇಸಾಯಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ…

54
firstsuddi

ಚಾಮರಾಜನಗರ : ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿ ಹಾಗೂ ಓರ್ವ ವಿದ್ಯಾರ್ಥಿನಿಗೆ ಕೊರೊನಾ ದೃಢಪಟ್ಟಿದೆ. ಶಾಲೆಗಳು ಆರಂಭವಾಗುವ ಮುನ್ನ ಎಲ್ಲ ವಿದ್ಯಾರ್ಥಿಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ಪಡೆದು ಶಾಲೆಗೆ ದಾಖಲು ಮಾಡಿಕೊಳ್ಳಲಾಗಿತ್ತು. ಆದರೆ ಕಳೆದ ಒಂದು ವಾರದ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ಕೆಮ್ಮು, ನೆಗಡಿ, ಶೀತ ಜ್ವರ ಕಂಡು ಬಂದ ಹಿನ್ನೆಲೆ ಹನೂರು ಪಟ್ಟಣದ ಕೋವಿಡ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದ ಸ್ವ್ಯಾಬ್ ಮಾದರಿಯಲ್ಲಿ 3 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಇದೀಗ ಆತಂಕ ಶುರುವಾಗಿದೆ.

ಕಳೆದ ವಾರವಷ್ಟೇ ಜಿಲ್ಲೆಯ ಯಳಂದೂರಿನ ಆದರ್ಶ ಶಾಲೆಯ ಇಬ್ಬರು ಬಾಲಕರಿಗೆ ಕೊರೊನಾ ಸೋಂಕು ತಗುಲಿತ್ತು. ಸಂತೇಮರಹಳ್ಳಿ ಕೋವಿಡ್ ಕೇಂದ್ರದಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.