ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ…

112
firstsuddi

ಚಾಮರಾಜನಗರ : ನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ತನಿಖಾಧಿಕಾರಿ ಶಿವಯೋಗಿ ಕಳಸದ್ ಅವರು ಭೇಟಿ ನೀಡಿದ್ದಾರೆ.

ಜಿಲ್ಲಾ ಸರ್ಜನ್ ಹಾಗೂ ಜಿಲ್ಲಾಧಿಕಾರಿ ಜೊತೆ ಸಮಾಲೋಚಿಸಿ ಆಕ್ಸಿಜನ್ ಪ್ಲಾಂಟ್ ಹಾಗೂ ಸಿಲಿಂಡರ್ ದಾಸ್ತಾನಿನ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಕ್ಸಿಜನ್ ದುರಂತಕ್ಕೆ ನೈಜ ಕಾರಣವೇನು, ಎಷ್ಟು ಮಂದಿ ಸೋಂಕಿತರು ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದರು.