ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್‍ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ…

40
firstsuddi

ಮೈಸೂರು : ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಗುಜರಾತ್ ನಿಂದ ಬಂದಿದ್ದ ಪ್ರವಾಸಿ ಬಸ್ 50 ಮಂದಿಯನ್ನು ಹೊತ್ತು ಚಾಮುಂಡಿ ಬೆಟ್ಟಕ್ಕೆ ಸಾಗುತ್ತಿತ್ತು. ಈ ವೇಳೆ ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಡಿಸೇಲ್ ಲೀಕೇಜ್ ನಿಂದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಭಾರಿ ಅನಾಹುತವೊಂದು ತಪ್ಪಿದ್ದು, ನಿಟ್ಟುಸಿರು ಬಿಡುವಂತಾಗಿದೆ.