ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ಬೆಳಗ್ಗೆ 8.26ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಿದರು. ಈ ಮೂಲಕ ವಿಶ್ವವಿಖ್ಯಾತ 411ನೇ ಮೈಸೂರು ದಸರಾಗೆ ಅಧಿಕೃತವಾಗಿ ಚಾಲನೆ ಸಿಕ್ಕಿತು.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ನಿ ಚನ್ನಮ್ಮ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ಇತರ ಅನೇಕ ಗಣ್ಯರು ಉಪಸ್ಥಿತರಿದ್ದರು.
ಇಂದು ಸಂಜೆ 6 ಗಂಟೆಗೆ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಇಂದಿನಿಂದ ಒಟ್ಟು 9 ದಿನಗಳ ಕಾಲ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 15ರಂದು ಜಂಬೂ ಸವಾರಿ ಮೆರವಣಿಗೆ ಮೂಲಕ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.










