ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಂಡೆಗಲ್ಲಿಗೆ ಡಿಕ್ಕಿಹೊಡೆದ ಕಾರು.

106

ಮೂಡಿಗೆರೆ: ಉಜಿರೆಯಿಂದ ಮೂಡಿಗೆರೆ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಂಡೆಗಲ್ಲಿಗೆ ಡಿಕ್ಕಿಹೊಡೆದಿರುವ ಘಟನೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಕಾರು ಬಂಡೆಕಲ್ಲಿಗೆ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಮೂರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಈ ಸಂಬಂಧ ಬಣಕಲ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.