ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು-ನಾಲ್ವರು ಸಾವು…

553
firstsuddi

ನೆಲಮಂಗಲ : ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆ ಉರುಳಿ ಬಿದ್ದು ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಸಮೀಪದ ದೇವಮಾಚೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಸುನೀಲ್, ಮಂಜುನಾಥ್, ರಾಘವೇಂದ್ರ ಹಾಗೂ ಸಂತೋಷ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ಬೆಂಗಳೂರಿನಿಂದ ಹುಲಿಯೂರುದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಘಟನೆಗೆ ಚಾಲಕ ಕೆರೆಯ ಏರಿ ಮೇಲೆ ಕಾರನ್ನು ವೇಗವಾಗಿ ಚಲಾಯಿಸಿದ್ದೆ ಕಾರಣ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.