ಹಾಸನ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ನಡೆದಿದೆ.
ಕನಕಪುರದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಬುಧವಾರ ಎರಡು ಬಸ್‍ಗಳಲ್ಲಿ ಪ್ರವಾಸ ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಗ್ಗೆ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಗಾಯಗಳಾಗಿದ್ದು, ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










