ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಒಂದು ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಮನೆ ಕಾಂಪೌಂಡ್‍ಗೆ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಬ್ರೇಕ್ ಫೇಲ್ ಆಗಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಯಶ್ ಅವರ ಮನೆ ಕಾಂಪೌಂಡಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಒಂದು ಸಂಪೂರ್ಣ ಜಖಂ ಆಗಿದೆ. ಬಳಿಕ ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ ಮೂಲಕ ಟ್ರ್ಯಾಕ್ಟರ್ ಅನ್ನು ಸ್ಥಳಾಂತರಿಸಿದ್ದಾರೆ.










