ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಶಾಲಾ ಬಸ್.

37
firstsuddi

ರಾಮನಗರ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾನಸ ಗಂಗೋತ್ರಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, ಇಂದು ಬೆಳಗ್ಗೆ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೂಂಡ ಮಕ್ಕಳನ್ನು ಕುದೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುದೂರು ಪೂಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.