ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ- 24 ಮಂದಿಗೆ ಗಾಯ…

51
firstsuddi

ಚಾಮರಾಜನಗರ: ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ 24 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಪ್ರವಾಸಿ ಬಸ್ ಊಟಿಯಿಂದ ಮೈಸೂರು ಕಡೆಗೆ ಹೊರಟಿದ್ದು, ಮೇಲುಕಾಮನಹಳ್ಳಿ ಬಳಿ ಬಂಡೀಪುರ ಕಾಡಿನ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಬಸ್ ವೇಗವಾಗಿದ್ದರಿಂದ ಪಲ್ಟಿಯಾಗಿದೆ. ಸದ್ಯ ದುರ್ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸಿನೊಳಗೆ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.