ಬಾಗಲಕೋಟೆ : ಪ್ರವಾಹ ಪೀಡಿತ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಪ್ರವಾಹದ ನೀರಿನಲ್ಲಿ ಬಿದ್ದಿರುವ ಘಟನೆ ಜಿಲ್ಲೆಯ ಹಿಪ್ಪರಗಿ ಬ್ಯಾರೇಜ್ನಲ್ಲಿ ನಡೆದಿದ್ದು, ಕಾರಿನಲ್ಲಿದ್ದ 7 ಮಂದಿಯನ್ನು ರಕ್ಷಿಸಲಾಗಿದೆ. ಕಾರಿನಲ್ಲಿದ್ದವರು ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದ್ದು, ಜಮಖಂಡಿಯಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪ್ರವಾಹದ ನೀರಿಗೆ ಬಿದ್ದಿದೆ. ಅದೇ ವೇಳೆ ಹಿಪ್ಪರಗಿಯಿಂದ ಜಮಖಂಡಿ ಕಡೆಗೆ ತೆರಳುತ್ತಿದ್ದ ಕೃಷಿ ಇಲಾಖೆ ಸಿಬ್ಬಂದಿಗಳು ಅದನ್ನು ಗಮನಿಸಿ ಕೂಡಲೇ ರಕ್ಷಣೆಗೆ ಇಳಿದು ನೀರಿನಲ್ಲಿ ಮುಳುಗುತ್ತಿದ್ದ 7 ಮಂದಿಯನ್ನು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.










