ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ-ಏಳು ಮಂದಿಗೆ ಗಂಭೀರ ಗಾಯ…

144
firstsuddi

ಗುಂಟೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಡಿವೈಡರ್‍ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಯಡ್ಲಪಾಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ವಿಜಯವಾಡ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಭರದಲ್ಲಿ ರಸ್ತೆ ಬದಿಯಲ್ಲಿದ್ದ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಸ್ ಪಲ್ಟಿಯಾಗಿ ರಸ್ತಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಏಳು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.