ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು-ಆರು ಮಂದಿ ದುರ್ಮರಣ…

218
firstsuddi

ಭೋಪಾಲ್ : ಮದುವೆ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ಕಾರು ಆಯತಪ್ಪಿ ರಸ್ತೆ ಬದಿಯ ಬಾವಿಗೆ ಬಿದ್ದು ಆರು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛತರ್ಪುರ್ ಜಿಲ್ಲೆಯ ಮಹಾರಾಜಪುರ್ ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣಿಕರು ಕಳೆದ ರಾತ್ರಿ ತಮ್ಮ ಸಂಬಂಧಿಕರ ಮದುವೆ ಸಮಾರಂಭವನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಬಾವಿಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ 9 ಮಂದಿ ಪೈಕಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.