ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು.

89
firstsuddi

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕಿಗೆ ಡಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ಈ ಅವಘಡ ಸಂಭವಿಸಿದೆ. ಕಾರನ್ನು ವಿವೇಕಾನಂದ ಶೆಣೈ (63) ಎಂಬವರು ಚಲಾಯಿಸುತ್ತಿದ್ದರು. ಈ ವೇಳೆ ಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಕಾರಿಗೆ ಬ್ರೇಕ್ ಹಾಕಲು ಸಾಧ್ಯವಾಗದೇ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕಾರು ಮತ್ತು ಒಂದು ದ್ವಿಚಕ್ರ ವಾಹನ ಜಖಂ ಆಗಿದೆ. ಈ ಸಂಬಂಧ ಮಂಗಳೂರಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.