ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು-6 ವರ್ಷದ ಬಾಲಕ ಸಾವು…

224
firstsuddi

ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿ 6 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದಲ್ಲಿ ನಡೆದಿದೆ. ಶಿವು(6) ಮೃತ ಬಾಲಕ ಎಂದು ಗುರುತಿಸಲಾಗಿದ್ದು, ಮೃತ ಬಾಲಕ ತನ್ನ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಗದಗದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲೇ ಇದ್ದ ಮನೆಯ ಕಡೆ ನುಗ್ಗಿದ್ದು, ಪರಿಣಾಮ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.