ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು-ವ್ಯಕ್ತಿ ಸಾವು…

157
firstsuddi

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕೆ ಎಂ ಎಫ್ ನಿರ್ದೇಶಕರೊಬ್ಬರು ಮೃತಪಟ್ಟ ಘಟನೆ ಹಾಲಾಡಿ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಹದ್ದೂರು ರಾಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿದ್ದರು.

ಪ್ರಾಥಮಿಕ ಮಾಹಿತಿಗಳ ಪ್ರಕಾರ ರಾಜೀವ ಶೆಟ್ಟಿಯವರು ಶಂಕರನಾರಾಯಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ಹಾಲಾಡಿ ಸೇತುವೆಯಲ್ಲಿ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.