ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು ; ಮೂವರು ಸಾವು…

137
firstsuddi

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹನೂರು ಗ್ರಾಮದ ಬಳಿ ನಡೆದಿದೆ.

ಮೃತರನ್ನು ಶೇಕ್ ಫೈಜಲ್ (44), ಮೆಹಕ್ (33), ಶೇಕ್ ಅಲಿ (11) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು, ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಲಗೂರು ಬಳಿ ಕಾರು ಹಳ್ಳಕ್ಕೆ ಬಿದ್ದಿದೆ. ಈ ವೇಳೆ ಇದ್ದಕ್ಕಿದ್ದ ಹಾಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಮೂವರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲಗೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.