ಚಿಕ್ಕಮಗಳುರು : ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವೂ ಇಲ್ಲದೇ ಪರಸ್ಪರ ಮಾತನಾಡುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…

172
firstsuddi

ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ನಡುವೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೈ ಕೈ ಹಿಡಿದುಕೊಂಡು ಮಾತನಾಡುತ್ತಿದ್ದ ನಾಲ್ವರ ವಿರುದ್ಧ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಜನವಸತಿ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಸಾಮಾಜಿಕ ಅಂತರವೂ ಇಲ್ಲದೇ ಒಬ್ಬೊಗೊಬ್ಬರು ಕೈ ಕೈ ಹಿಡಿದುಕೊಂಡು ಮಾತನಾಡುತ್ತಿದ್ದ ವಾಸುದೇವ್, ಅಭಿಲಾಷ್, ಸಾಗರ್ ಹಾಗೂ ಕಿರಣ್ ಎಂಬುವವರು ವಿರದ್ಧ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.