ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿಟಿ ರವಿ ಅವರು ಹೀನಾಯ ಸೋಲು ಅನುಭವಿಸಿದ್ದಾರೆ.
ಸತತ ನಾಲ್ಕು ಬಾರಿ ವಿಜಯ ಸಾಧಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತನ್ನ ಗರಡಿಯಲ್ಲಿ ಬೆಳಗಿದ್ದ ಕಾಂಗ್ರೆಸ್ಸಿನ ಹೆಚ್.ಡಿ.ತಮ್ಮಯ್ಯ ವಿರುದ್ಧವೇ ಸೋಲನ್ನು ಅನುಭವಿಸಿದ್ದಾರೆ.
ಕಾಂಗ್ರೆಸ್‌ನ ಹೆಚ್.ಡಿ.ತಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 55678 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.










