ಚಿಕ್ಕಮಗಳೂರು: ಜಿಲ್ಲೆಯ ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 1 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ.
ಬೈಕ್‌ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ 1 ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿವೆ.
ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










