ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ…

65
firstsuddi

ಚಿಕ್ಮಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ಸಿದ್ದರಾಮಯ್ಯ ಅವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಚಿಕ್ಕಮಗಳೂರಿಗೆ ನಿನ್ನೆ ತೆರಳಿದ್ದು, ಇಂದು ಜಿಲ್ಲಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಅಂಗವಾಗಿ ಮಕ್ಕಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಬಿಗಿ ಭದ್ರತೆ ನಡುವೆಯೂ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯಭೂಮಿಗೆ ಬರುವುದು ಬೇಡ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ದೇಶದ ಪಿತಾಮಹ ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ. ನಾನು ಸತ್ಯ ಹೇಳುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಅವರ ಫೋಟೋವನ್ನು ಇಟ್ಟು ಬಿಜೆಪಿ ಯವರು ಪೂಜೆ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.