ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಗುಂಡಿನ ದಾಳಿ ; ಬೈಕ್‍ನಲ್ಲಿ ತೆರಳುತ್ತಿದ್ದ ಸವಾರರಿಬ್ಬರು ಸಾವು…

135
firstsuddi

ಚಿಕ್ಕಮಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸವಾರರಿಬ್ಬರ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿದರೆ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ಪ್ರಕಾಶ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. 

ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿರುವ ಬಾಳೆಹೊನ್ನೂರು ಪೊಲೀಸರು ಆತ ನಿಜಕ್ಕೂ ಮಾನಸಿಕ ಅಸ್ವಸ್ಥನಾ, ಗುಂಡಿನ ದಾಳಿ ಹಿಂದೆ ಬೇರೆ ಕಾರಣ ಇದ್ಯಾ ಎಂಬೆಲ್ಲಾ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.